Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. Yadgiri | ವಾಲ್ಮೀಕಿ ನಿಗಮದ ಅಕ್ರಮ...

Yadgiri | ವಾಲ್ಮೀಕಿ ನಿಗಮದ ಅಕ್ರಮ ವರ್ಗಾವಣೆ ಪ್ರಕರಣ : ಸಚಿವ ಸಂಪುಟಕ್ಕೆ ನಾಗೇಂದ್ರ ಮರುಸೇರ್ಪಡೆಗೆ ಬಿಜೆಪಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ12 Aug 2026 6:22 PM IST
share
Yadgiri | ವಾಲ್ಮೀಕಿ ನಿಗಮದ ಅಕ್ರಮ ವರ್ಗಾವಣೆ ಪ್ರಕರಣ : ಸಚಿವ ಸಂಪುಟಕ್ಕೆ ನಾಗೇಂದ್ರ ಮರುಸೇರ್ಪಡೆಗೆ ಬಿಜೆಪಿ ಆಕ್ರೋಶ

ಯಾದಗಿರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ಸುಮಾರು 186–187 ಕೋಟಿ ರೂ. ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಪ್ರಕರಣದ ತನಿಖೆ ಮುಂದುವರಿದಿರುವಾಗಲೇ ಅವರನ್ನು ಮತ್ತೆ ಸಚಿವರನ್ನಾಗಿ ನೇಮಿಸಿರುವುದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರುಪಯೋಗವಾಗಿದೆ ಎಂಬ ಆರೋಪವಿರುವ ಪ್ರಕರಣದಲ್ಲಿ ಸಂಬಂಧಪಟ್ಟ ವ್ಯಕ್ತಿಯನ್ನೇ ಮತ್ತೆ ಸಚಿವರನ್ನಾಗಿ ಮಾಡಿರುವುದು ಪರಿಶಿಷ್ಟ ಪಂಗಡದ ಜನರಿಗೆ ಮಾಡಿದ ದ್ರೋಹ ಎಂದು ಆರೋಪಿಸಿದರು.

ನಿಗಮದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ, ತೆಲಂಗಾಣದಲ್ಲಿಯೂ ಖಾತೆಗಳನ್ನು ತೆರೆದು ಹಣ ಡ್ರಾ ಮಾಡಲಾಗಿದೆ ಎಂಬ ಅಂಶಗಳು ಜಾರಿ ನಿರ್ದೇಶನಾಲಯದ ತನಿಖಾ ದಾಖಲೆಗಳಲ್ಲಿ ಉಲ್ಲೇಖವಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

‘ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ಸಿಕ್ಕಿಲ್ಲ. ತನಿಖೆ ನಡೆಯುತ್ತಿರುವಾಗಲೇ ಮತ್ತೆ ಸಚಿವ ಸ್ಥಾನ ನೀಡಿರುವುದರ ಹಿಂದೆ ಯಾವುದಾದರೂ ಒತ್ತಡವಿದೆಯೇ?’ ಎಂದು ಪ್ರಶ್ನಿಸಿದರು.

ನಾಗೇಂದ್ರ ಅವರ ರಾಜೀನಾಮೆ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಗ್ರಹಿಸಿದ ಅವರು, ರಾಜೀನಾಮೆ ಪಡೆಯುವವರೆಗೆ ಬೆಂಗಳೂರಿನಲ್ಲಿ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ರಾಜ್ಯ ನಾಯಕರು ಹೋರಾಟ ನಡೆಸಲಿದ್ದಾರೆ. ಅದೇ ವೇಳೆ ಜಿಲ್ಲಾಮಟ್ಟದಲ್ಲಿಯೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ, ಯುವ ಮುಖಂಡ ಮಹೇಶಗೌಡ ಮುದ್ನಾಳ, ದೇವೇಂದ್ರ ನಾದಾ, ಹಿರಿಯ ನಾಯಕಿ ನಾಗರತ್ನ ಕುಪ್ಪಿ, ಬಸವರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Yadgiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X