ಯಾದಗಿರಿ | ವಿಶ್ವ ತಂಬಾಕು ರಹಿತ ದಿನಾಚರಣೆ
ತಂಬಾಕು ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು : ಧರಣೇಶ ಎಸ್.ಪಿ.

ಯಾದಗಿರಿ: ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿದು ತಂಬಾಕು ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್.ಪಿ. ಅವರು ಹೇಳಿದರು.
ಯಾದಗಿರಿ ನಗರದಲ್ಲಿ ಇತ್ತೀಚಿನ ನಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಆರೋಗ್ಯ ತಪಾಸಣೆ ಶಿಬಿರ, ತಂಬಾಕು ಕುರಿತು ಅರಿವು ಮೂಡಿಸು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು,
ಸಂಪನ್ಮೂಲ ವ್ಯಕ್ತಿಗಳಾದ ಡಾ.ಸೌಮ್ಯ ಭಾವಿ ಅವರು ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್, ಗ್ಯಾಂಗ್ರೀನ್, ಬಿಪಿ, ಸುಗರ್, ಟಿ.ಬಿ. ತಲೆ ಕೂದಲು ಉದುರುವಿಕೆ, ಅವಧಿ ಪೂರ್ವ ಮಗುವಿನ ಜನನ ಮುಂತಾದ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲಾ ಸಲಹೆಗಾರರಾದ ಶ್ರೀಮತಿ ಮಹಾಲಕ್ಷ್ಮಿ ಸಜ್ಜನ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಡಿ.ಎಸ್.ಪಿ.ಭರತ ತಲ್ವಾರ್, ಡಾ.ಸೌಮ್ಯ ಭಾವಿ, ಡಾ.ನಾಗರಾಜ ಗೌಳಿ, ಡಾ.ನಿಕಿತ ಗೋವಿಂದ, ಯಾದಗಿರಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ, ಸಮಾಜ ಕಾರ್ಯಕರ್ತರಾದ ವಿಜಯ ಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.





